ADVERTISEMENT

ಕರ್ನಾಟಕದ ಅಜಿತ್‌ ಪವಾರ್‌ಗೆ ಮೋಸವಾಗಿದೆ, ಸರ್ಕಾರಕ್ಕೆ ಮೂರೇ ತಿಂಗಳು ಭವಿಷ್ಯ: ಈಶ್ವರಪ್ಪ

ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2023, 9:51 IST
Last Updated 4 ಜುಲೈ 2023, 9:51 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಸರ್ಕಾರವು ಷರತ್ತು ವಿಧಿಸಿ, ಜನರಿಗೆ ಮೋಸ ಎಸಗುತ್ತಿದೆ. ಯಾವುದೇ ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಮುಖಂಡ ಕೆ.ಎಸ್.ಈಶ್ವರಪ್ಪ ಮಾತನಾಡಿ, ಈ ಸರ್ಕಾರಕ್ಕೆ ಮೂರೇ ತಿಂಗಳು ಭವಿಷ್ಯ. ಮೂರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ. ಕರ್ನಾಟಕದ ಅಜಿತ್‌ ಪವಾರ್‌ಗೆ ಮೋಸವಾಗಿದೆ. ಈಗಿನ ಮುಖ್ಯಮಂತ್ರಿ ಜನರಿಗೆ ಮಾತ್ರವಲ್ಲದೇ ತನಗೂ ವಂಚಿಸಿದ್ದಾರೆ ಎಂದು ಆ ಪವಾರ್‌ಗೆ ಈ ಗೊತ್ತಾಗಿದೆ. ಹೀಗಾಗಿ ಸರ್ಕಾರಕ್ಕೆ ಭವಿಷ್ಯವಿಲ್ಲ. ಮಹಾರಾಷ್ಟ್ರದಲ್ಲಿ ನಡೆದಂತೆ ರಾಜ್ಯದಲ್ಲೂ ಬದಲಾವಣೆ ಆಗಲಿದೆ ಎಂದು ಹೇಳಿದರು.

ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಗ್ಯಾರಂಟಿಗಳ ಹೆಸರಲ್ಲಿ ಜನರಿಗೆ ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿ ಜಾರಿ ಮಾಡುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಹೇಳಿದರು.

ADVERTISEMENT

ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಮಾತನಾಡಿ, ಕರ್ನಾಟಕದ ಆರ್ಥಿಕತೆಯನ್ನು ನಾಶಗೊಳಿಸಲು ಕಾಂಗ್ರೆಸ್ ಮುಂದಾಗಿದೆ. ಮತಾಂತರ ನಿಷೇಧ ಕಾಯ್ದೆ ವಾಪಸ್‌ ಪಡೆದು ಕಾಂಗ್ರೆಸ್ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರ ಗೋ ಹತ್ಯೆಯ ಪರ ನಿಂತಿದೆ ಎಂದು ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.