ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನ; ಕಾಂಗ್ರೆಸ್ ಸರ್ಕಾರದಿಂದ ಕನ್ನಡಾಂಬೆಗೆ ಅಪಮಾನ: ಅಶೋಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಡಿಸೆಂಬರ್ 2024, 6:48 IST
Last Updated 21 ಡಿಸೆಂಬರ್ 2024, 6:48 IST
<div class="paragraphs"><p> ಆರ್‌. ಅಶೋಕ</p></div>

ಆರ್‌. ಅಶೋಕ

   

ಬೆಂಗಳೂರು: 'ಮಂಡ್ಯದಲ್ಲಿ ಆರಂಭವಾಗಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಮಾಡಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಇಂದು (ಶನಿವಾರ) ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, 'ಕನ್ನಡ ನಾಡಿನ ನುಡಿ ಪರಂಪರೆ, ಶ್ರೀಮಂತ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನು ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ರಾಜಕೀಯ ವೇದಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

'ಮುಖ್ಯಮಂತ್ರಿಗಳ ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ - ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ' ಎಂದು ಅವರು ಪ್ರಶ್ನಿಸಿದ್ದಾರೆ.

'ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನು ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.