ಕರ್ನಾಟಕದಲ್ಲಿ ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ಮೋದಿ ಗುರುವಾರ ಆರೋಪಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪಿತ್ರಾರ್ಜಿತ ಆಸ್ತಿ ಮೇಲೆ ತೆರಿಗೆ ಹೇರಲು ಹೊರಟಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಮುಸ್ಲಿಂ ಎಂಬ ಕಾರಣಕ್ಕೆ ಮಾತ್ರ ಉಚಿತ ರೇಷನ್ ಪಡೆಯುತ್ತಾರೆ ಎಂಬುದನ್ನು ನೀವು ಎಂದಾದರೂ ಕೇಳಿದ್ದೀರಾ? ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಕಾಂಗ್ರೆಸ್ ಹೇಳುತ್ತದೆ. ಆದರೆ ಬಡವರಿಗೆ ಮೊದಲ ಹಕ್ಕು ಎಂದು ನಾವು ಹೇಳುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.