ADVERTISEMENT

ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 20:31 IST
Last Updated 11 ಜನವರಿ 2024, 20:31 IST
ಬಿಎಸ್‌ವೈ ಬಂಧನ: ಸಿಬಿಐ ಇಂಗಿತ
ಬಿಎಸ್‌ವೈ ಬಂಧನ: ಸಿಬಿಐ ಇಂಗಿತ   

ಬೆಂಗಳೂರು: ರಾಮಲಲ್ಲಾ ಪ್ರತಿಷ್ಠಾಪನೆಗೆ ಆಮಂತ್ರಣ ನೀಡಿದರೂ ಹೋಗುವುದಿಲ್ಲ ಎಂಬ ತೀರ್ಮಾನ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಇಡೀ ದೇಶವೇ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿದೆ. ರಾಮರಾಜ್ಯ ಹಾಗೂ ರಾಮನ ಕನಸು ನನಸಾಗಬೇಕಿದೆ. ಅಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ಕೈಗೊಂಡ ನಿರ್ಧಾರವನ್ನು ನಾನು ಖಂಡಿಸುತ್ತೇನೆ’ ಎಂದರು.  

‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅಂತಹವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪಪಡುತ್ತಾರೆ’ ಎಂದು ಹೇಳಿದರು.

ADVERTISEMENT

ಜಾತ್ಯತೀತತೆ ಬಣ್ಣ ಬಯಲು: ಕೋಟ

ಇಲ್ಲಿಯವರೆಗೆ ಜಾತ್ಯತೀತತೆಯ ಮುಖವಾಡ ಹಾಕಿದ್ದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ರಾಮಲಲ್ಲಾ ಪ್ರತಿಷ್ಠಾಪನೆ ಆಹ್ವಾನ ತಿರಸ್ಕರಿಸುವ ಮೂಲಕ ಅದು ಮತೀಯವಾದಿ ಪಕ್ಷ ಎಂಬುದು ಸಾಬೀತಾಗಿದೆ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ರಾಮಮಂದಿರ ನಿರ್ಮಿಸಲಾಗಿದೆ. ಭಕ್ತಾದಿಗಳೇ ದೇಣಿಗೆಯಿಂದ ಭವ್ಯ ದೇಗುಲ ನಿರ್ಮಾಣವಾಗಿದೆ. ಇಂತಹದೊಂದು ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ಬಿಟ್ಟು ಆಹ್ವಾನ ತಿರಸ್ಕರಿಸುವುದಾಗಿ ಕಾಂಗ್ರೆಸ್ ಹೇಳಿದೆ. ಇದರ ಮುಂದಿನ ಫಲವನ್ನು ಲೋಕಸಭಾ ಚುನಾವಣೆಯಲ್ಲಿ ಆ ಪಕ್ಷ ಅನುಭವಿಸಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.