ADVERTISEMENT

ಕಾಂಗ್ರೆಸ್– ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕಣಕ್ಕೆ

ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 20:09 IST
Last Updated 6 ಫೆಬ್ರುವರಿ 2020, 20:09 IST

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಕಾಂಗ್ರೆಸ್–ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ.ಆರ್.ಅನಿಲ್ ಕುಮಾರ್ ಗುರುವಾರ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಡಿಸಿಎಂ ಲಕ್ಷ್ಮಣ ಸವದಿ ಕಣಕ್ಕೆ ಇಳಿದಿದ್ದಾರೆ.

ವಿಧಾನಸಭೆಯಲ್ಲಿ ಗೆಲ್ಲುವಷ್ಟು ಸಂಖ್ಯಾಬಲಇಲ್ಲದ ಕಾರಣಕ್ಕೆ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡರು ಸ್ಪಷ್ಟಪಡಿಸಿದ್ದರು. ಆದರೆ ಸಚಿವ ಸಂಪುಟ ವಿಸ್ತರಣೆಯಿಂದಾಗಿ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ತಲೆದೋರಿದ್ದು, ಇದರ ಲಾಭ ಸಿಗಬಹುದು ಎಂಬ ಕಾರಣಕ್ಕೆ ಜೆಡಿಎಸ್‌ ಜತೆಗೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಹೇಳಲಾಗುತ್ತಿದೆ.

ಅನಿಲ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಅವರ ನಾಮಪತ್ರಕ್ಕೆ ಜೆಡಿಎಸ್‌ನ ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪೂರ ಇತರರು ಸೂಚಕರಾಗಿ ಸಹಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.