ಬೆಂಗಳೂರು: ವಿದ್ಯುನ್ಮಾನ ಮತಯಂತ್ರ ಸುರಕ್ಷಿತ ಎಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬಾರ್ಡ್, ‘ಇವಿಎಂ ಮತದಾನ ಅಸುರಕ್ಷಿತ, ಪೇಪರ್ ಬ್ಯಾಲೆಟ್ ಮತದಾನ ಸೇಫ್’ ಎಂದಿರುವುದನ್ನು ಕಾಂಗ್ರೆಸ್ ತನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಕ್ಯಾಬಿನೆಟ್ ಸಭೆಯಲ್ಲಿ ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬಾರ್ಡ್, ಎಲೆಕ್ಟ್ರಾನಿಕ್ ಮತದಾನ (EVM ) ವ್ಯವಸ್ಥೆಗಳಿಂದ ತಿರುಚುವಂತಹ ಯತ್ನಗಳು ನಡೆದಿದೆ ಎಂದು ಭದ್ರತಾ ದೋಷಗಳ ಪುರಾವೆಗಳನ್ನು ಪ್ರಸ್ತುತಪಡಿಸಿದರು.
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಸುರಕ್ಷತೆತ ಬಗ್ಗೆ ತುಳಸಿ ಗಬಾರ್ಡ್ ಕಳವಳ ವ್ಯಕ್ತಪಡಿಸಿದ್ದರು. ಮತಪತ್ರಗಳನ್ನು ಬಳಸಿ ನಡೆಸುವ ಚುನಾವಣಾ ವ್ಯವಸ್ಥೆಗೆ ಮತ್ತೆ ಮರಳಬೇಕು ಎಂದೂ ಪ್ರತಿಪಾದಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.