ADVERTISEMENT

ಕೋವಿಡ್ ಲಸಿಕೆ ಹಾಕಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 16:07 IST
Last Updated 15 ಮಾರ್ಚ್ 2021, 16:07 IST
ಸಿದ್ದರಾಮಯ್ಯ ಸೋಮವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಸೋಮವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.   

ಬೆಂಗಳೂರು: ಮಾಜಿ ಸಿಎಂ ಮತ್ತು ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿದ್ದ ಅವರು, ಅಲ್ಲಿನ ಸಿಬ್ಬಂದಿ ಮತ್ತು ವೈದ್ಯರಿಂದ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಲಸಿಕೆ ಪಡೆದುಕೊಂಡ ಬಳಿಕ ವೈದ್ಯರು ಸಿದ್ದರಾಮಯ್ಯ ಅವರಿಗೆ ಸೂಚನೆಗಳನ್ನು ನೀಡಿದ್ದಾರೆ.

ADVERTISEMENT

ಲಸಿಕೆ ಪಡೆದುಕೊಂಡ ಸಂದರ್ಭದಲ್ಲಿ ಸೂಜಿ ಚುಚ್ಚಿರುವುದು ಗೊತ್ತೇ ಆಗಲಿಲ್ಲ ಎಂದು ಸಿದ್ದರಾಮಯ್ಯ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಜತೆ ನಗೆಚಟಾಕಿ ಹಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.