ADVERTISEMENT

ಕೋರ್ಟ್‌ಗೆ ಹಾಜರಾದ ಡಿಕೆಶಿ

ಶಾಸಕರು ಮತ್ತು ಆಪ್ತರ ಬಳಿ ₹ 8.60 ಕೋಟಿ ವಶ ಪ್ರಕರಣ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 19:19 IST
Last Updated 26 ನವೆಂಬರ್ 2019, 19:19 IST

ಬೆಂಗಳೂರು: ನೋಟು ಅಮಾನ್ಯೀಕರಣದ ವೇಳೆ ಆದಾಯ ಇಲಾಖೆ ಅಧಿಕಾರಿಗಳು ₹ 8.60 ಕೋಟಿ ಅಕ್ರಮ ಹಣ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಡಿ.ಕೆ.ಶಿವಕುಮಾರ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ದೋಷಾರೋಪ ನಿಗದಿಪಡಿಸಲಿದೆ.

"ನನ್ನನ್ನು ಪ್ರಕರಣದಿಂದ ಕೈಬಿಡಬೇಕು" ಎಂದು ಕೋರಿದ್ದ ಶಿವಕುಮಾರ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ಇಲ್ಲಿನ "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ"ಕ್ಕೆ ಹಾಜರಾಗಿದ್ದರು.

ಡಿಕೆಶಿ ಅವರ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಡಿಸೆಂಬರ್‌ 10ಕ್ಕೆ ಮುಂದೂಡಿದರು. ಇದೇ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರೂ ಕೋರ್ಟ್‌ಗೆ ಬಂದಿದ್ದರು. ಇಬ್ಬರೂ ಕೆಲಕಾಲ ಮಾತುಕತೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.