ADVERTISEMENT

ಜಾರ್ಜ್‌ಗೆ ಇ.ಡಿ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 19:30 IST
Last Updated 14 ಜನವರಿ 2020, 19:30 IST
ಕೆ.ಜೆ. ಜಾರ್ಜ್‌
ಕೆ.ಜೆ. ಜಾರ್ಜ್‌   

ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮ) ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್‌ ಶಾಸಕ ಕೆ.ಜೆ. ಜಾರ್ಜ್‌ಗೆ ಇದೇ 16ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್‌ ನೀಡಿದೆ.

ಪತ್ನಿ ಸುಜಾ ಜಾರ್ಜ್‌, ಮಕ್ಕಳಾದ ರಾಣಾ ಜಾರ್ಜ್‌, ರೆನಿತಾ ಜಾರ್ಜ್‌ ಅವರೊಂದಿಗೆ ಬೆಳಿಗ್ಗೆ 11ಕ್ಕೆ ಇಲ್ಲಿನ ಇ.ಡಿ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಬರುವಂತೆ ನೋಟಿಸ್‌ನಲ್ಲಿ ಹೇಳಲಾಗಿದೆ. ನೋಟಿಸ್‌ ಬಂದಿರುವುದನ್ನು ಖಚಿತಪಡಿಸಿದ ಜಾರ್ಜ್, ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.

ಜಾರ್ಜ್ ಸಚಿವರಾಗಿದ್ದಾಗ ದೇಶ– ವಿದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ’ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಮುಖಂಡರಾದ ರವಿಕೃಷ್ಣಾರೆಡ್ಡಿ ಹಾಗೂ ಸಿ.ಎನ್‌. ದೀಪಕ್‌ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಇದರ ಆಧಾರದಲ್ಲಿ ವಿಚಾರಣೆ ಆರಂಭವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.