
ಪ್ರಜಾವಾಣಿ ವಾರ್ತೆ
ರಾಜೀವ್ ಗೌಡ
ಶಿಡ್ಲಘಟ್ಟ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಅವರಿಗೆ ಧಮ್ಕಿ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
ಕೆಪಿಸಿಸಿಯ ಶಿಸ್ತುಪಾಲನಾ ಸಮಿತಿ ಶಿಫಾರಸ್ಸಿನಂತೆ ಕೆಪಿಸಿಸಿಯ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಅವರು ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅಭಿನಯದ ಚಿತ್ರ ಕಲ್ಟ್ ಚಿತ್ರದ ಪ್ರಚಾರ ಫ್ಲೆಕ್ಸ್ ತೆರವುಗೊಳಿಸಿದ ಹಿನ್ನಲೆಯಲ್ಲಿ ರಾಜೀವ್‌ಗೌಡ ಅವರು ಪೌರಾಯುಕ್ತೆ ಅಮೃತ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು.
ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.