ADVERTISEMENT

ಇಂದು ಮತ್ತೆ ಕಾಂಗ್ರೆಸ್‌ ಸಿಎಲ್‌ಪಿ ಸಭೆ ಕರೆದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 21 ಜನವರಿ 2019, 4:02 IST
Last Updated 21 ಜನವರಿ 2019, 4:02 IST
   

ಬೆಂಗಳೂರು:ರೆಸಾರ್ಟ್‌ ರಾಜಕಾರಣದ ಮೂಲಕ ಸರ್ಕಾರ ಸುಭದ್ರಗೊಳಿಸಿಕೊಳ್ಳಲು ಕಸರತ್ತು ನಡೆಸಿರುವ ಮೈತ್ರಿ ಸರ್ಕಾರದ ಮಿತ್ರ ಪಕ್ಷ ಕಾಂಗ್ರೆಸ್‌ ಇಂದು ಮತ್ತೆ ಎರಡನೇ ಬಾರಿಗೆ ಸಿಎಲ್‌ಪಿ ಸಭೆ ಕರೆದಿದೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ಬೆಳಿಗ್ಗೆ 11ಕ್ಕೆ ಬೆಂಗಳೂರಿನಲ್ಲಿ ಸಿಎಲ್‌ಪಿ ಸಭೆ ಕರೆದಿದ್ದಾರೆ. ಎಲ್ಲಾ ಶಾಸಕರು ಸಭೆಗೆ ಹಾಜರಾಗುವಂತೆ ಸೂಚನೆಯನ್ನೂ ನೀಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಬಿಜೆಪಿ ಶಾಸಕರು ಗುರುಗ್ರಾಮದ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದರು, ಕಾಂಗ್ರೆಸ್‌ನ ನಾಲ್ವರು ಶಾಸಕರು ಮುಂಬೈನಲ್ಲಿದ್ದಾರೆ ಎಂದು ತಿಳಿಯುತ್ತಿದ್ದಂತೆ ಕೈ ಪಾಳಯದಲ್ಲಿ ತಳಮಳ ಉಂಟಾಗಿ ರೆಸಾರ್ಟ್‌ ಮೊರೆ ಹೋಗಿದ್ದರು. ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಮೂರು ದಿನಗಳಿಂದ ತಂಗಿದ್ದಾರೆ.

ADVERTISEMENT

ಶನಿವಾರ ತಡರಾತ್ರಿ ಶಾಸಕರಾದ ಆನಂದ್‌ ಸಿಂಗ್‌ ಹಾಗೂ ಜೆ.ಎನ್‌. ಗಣೇಶ್‌ ಅವರ ನಡುವೆ ಹೊಡೆದಾಡಿಕೊಂಡಿದ್ದಾರೆ.

‘ಆಪರೇಷನ್ ಕಮಲ'ದ ಕುರಿತು ‘ಗೂಢಚರ್ಯೆ’ ನಡೆಸಿ ಕಾಂಗ್ರೆಸ್‌ನ ಹೈಕಮಾಂಡ್‌ ಎದುರು ಮಾಹಿತಿ ಸೋರಿಕೆಯಾದ ವಿಷಯ, ಆ ಪಕ್ಷದ ಶಾಸಕರಾದ ಆನಂದ್‌ ಸಿಂಗ್‌ ಹಾಗೂ ಜೆ.ಎನ್‌. ಗಣೇಶ್‌ ಅವರ ನಡುವೆ ಹೊಡೆದಾಟಕ್ಕೆ ಕಾರಣವಾಗಿದೆ. ಈ ಘಟನೆಯಿಂದ ‘ಕೈ’ ಪಾಳಯದ ನಾಯಕರು ಮುಜುಗರಕ್ಕೆ ಒಳಗಾಗುವಂತಾಗಿದೆ.

ಘಟನೆಯಲ್ಲಿ ಆನಂದ್‌ ಸಿಂಗ್‌ ಅವರ ತಲೆ ಹಾಗೂ ಕಿಬ್ಬೊಟ್ಟೆಗೆ ಗಾಯವಾಗಿದ್ದು, ಅವರನ್ನು ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

* ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.