ADVERTISEMENT

ಕಾಂಗ್ರೆಸ್‌ ಬೆಂಬಲಿಸದಿದ್ದರೆ ದೇವೇಗೌಡರು ಪ್ರಧಾನಿಯಾಗುತ್ತಿದ್ದರಾ?: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜೂನ್ 2022, 8:18 IST
Last Updated 6 ಜೂನ್ 2022, 8:18 IST
 ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ರಾಜ್ಯಸಭಾ ಚುನಾವಣಾ ಕಾವು ಏರುತ್ತಿದ್ದು, ಪಕ್ಷಗಳ ಅಭ್ಯರ್ಥಿಗಳ ಪರ ಮತ್ತು ವಿರೋಧದ ಪ್ರಚಾರ ಹೇಳಿಕೆಗಳು ಹೆಚ್ಚಾಗುತ್ತಿವೆ.

ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ಪಕ್ಷ ಬೆಂಬಲಿಸದೆ ಹೋಗಿದ್ದರೆ ದೇವೇಗೌಡರು ಪ್ರಧಾನಿಯಾಗುತ್ತಿದ್ದರಾ? ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರಾಜ್ಯಸಭಾ ಚುನಾವಣೆಯಲ್ಲಿ
ಬಿಜೆಪಿ ಕರ್ನಾಟಕ ಗೆಲ್ಲಬಾರದು ಎಂಬ ಉದ್ದೇಶ ಇದ್ದರೆ ತಮ್ಮ ಪಕ್ಷದ ಅಭ್ಯರ್ಥಿಯನ್ನು ನಿವೃತ್ತಿಗೊಳಿಸಿ ನಮಗೆ ಬೆಂಬಲಿಸಲಿ, ನಮ್ಮದು ಜಾತ್ಯಾತೀತ ಪಕ್ಷ. ಕುಮಾರಸ್ವಾಮಿ ಅವರದ್ದೂ ಜಾತ್ಯಾತೀತ ಪಕ್ಷ ಅಲ್ವಾ?

ADVERTISEMENT

ಕಾಂಗ್ರೆಸ್‌ ಪಕ್ಷ ಬೆಂಬಲಿಸದೆ ಹೋಗಿದ್ದರೆದೇವೇಗೌಡರು ಪ್ರಧಾನಿಯಾಗುತ್ತಿದ್ದರಾ? ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಿದಾಗ ನಾವು ಅಭ್ಯರ್ಥಿಯನ್ನೇ ಹಾಕದೆ ಅವರನ್ನು ಗೆಲ್ಲಿಸಿಲ್ವೇ? ಜೆಡಿಎಸ್‌ ‌ಪಕ್ಷದ 37 ಜನ ಶಾಸಕರಿದ್ದರೂ ನಾವು ಕುಮಾರಸ್ವಾಮಿಗೆ ಬೆಂಬಲ ನೀಡಿ ಅವರನ್ನು ಮುಖ್ಯಮಂತ್ರಿ ಮಾಡಿಲ್ವಾ?ಇದು ನಮ್ಮ ಸೈದ್ಧಾಂತಿಕ ಬದ್ಧತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.