ADVERTISEMENT

ಅಂತರರಾಷ್ಟ್ರೀಯ ಯೋಗ ದಿನ: ಯೋಗ ಪ್ರಚಾರಕ್ಕಲ್ಲ, ಆರೋಗ್ಯಕ್ಕಾಗಿ ಎಂದ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2022, 7:58 IST
Last Updated 21 ಜೂನ್ 2022, 7:58 IST
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಸಂಗ್ರಹ ಚಿತ್ರ)   

ಬೆಂಗಳೂರು:ಅಂತರರಾಷ್ಟ್ರೀಯ ಯೋಗ ದಿನ ಪ್ರಯುಕ್ತ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಯೋಗ ಪ್ರಚಾರಕ್ಕಲ್ಲ, ಆರೋಗ್ಯಕ್ಕಾಗಿ’ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

‘ಶ್ರದ್ಧೆ, ಬದ್ಧತೆ ಮತ್ತು ಸಹೃದಯತೆಯಿಂದ ಬೌದ್ಧಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗ ಮಾಡೋಣ. ಯೋಗ ಪ್ರಚಾರಕ್ಕಲ್ಲ, ಆರೋಗ್ಯಕ್ಕಾಗಿ. ಸರ್ವರಿಗೂ ಅಂತರರಾಷ್ಟ್ರೀಯ ಯೋಗ ದಿನದ ಶುಭಾಶಯಗಳು’ ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜೂನ್ 21 ಅನ್ನು ಪ್ರತಿ ವರ್ಷ ಅಂತರರಾಷ್ಟ್ರೀಯ ಯೋಗ ದಿನವೆಂದು ಆಚರಿಸಲಾಗುತ್ತಿದೆ. ಈ ವರ್ಷ 8ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದ್ದು, ಮೈಸೂರಿನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.