ADVERTISEMENT

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಪಕ್ಷದವರೇ ಸಾಕ್ಷ್ಯ ನೀಡಿದ್ದಾರೆ: ಕಟೀಲ್

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 10:56 IST
Last Updated 13 ಅಕ್ಟೋಬರ್ 2021, 10:56 IST
   

ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ..

ತಕ್ಕಡಿ‌‌ ಮೇಲೇಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯಾಧ್ಯಕ್ಷರಾಗಿ ಇದ್ದರೆ ಪಕ್ಷ ನಿರ್ನಾಮವಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿರುವುದು ತಡವಾಗಿಯಾದರೂ ಜ್ಞಾನೋದಯವಾದಂತಾಗಿದೆ ಎಂದು ಕಟೀಲ್ ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು. ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆ ಎಂದು ಕಟೀಲ್ ಟ್ವೀಟ್ ಮಾಡಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.