
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕೆಪಿಸಿಸಿ ಕಚೇರಿಯ ಆವರಣದಲ್ಲಿ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಗುರುವಾರ ಅವಕಾಶ ಕಲ್ಪಿಸಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಆಸ್ಕರ್ ಅವರ ಪತ್ನಿ ಬ್ಲಾಸಂ ಫರ್ನಾಂಡಿಸ್, ಪುತ್ರ ಓಶಾನ್ ಫರ್ನಾಂಡಿಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.