ADVERTISEMENT

ಸೋಂಕಿತರ ಪ್ರಾಣ ರಕ್ಷಿಸಲು ರಾಜ್ಯ ಸರ್ಕಾರ ವಿಫಲ: ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಮೇ 2021, 11:23 IST
Last Updated 12 ಮೇ 2021, 11:23 IST
ಕಾಂಗ್ರೆಸ್‌ ಪ್ರತಿಭಟನೆ
ಕಾಂಗ್ರೆಸ್‌ ಪ್ರತಿಭಟನೆ   

ಬೆಂಗಳೂರು: ಕೊರೊನಾ ಸೋಕಿತರ ಪ್ರಾಣ ರಕ್ಷಿಸಲು ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕರು ವಿಕಾಸಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಬುಧವಾರ ಧರಣಿ ನಡೆಸುತ್ತಿದ್ದಾರೆ.

ಗಂಭೀರಾವಸ್ಥೆಯಲ್ಲಿರುವ ರೋಗಿಗಳಿಗೆ ಹಾಸಿಗೆ, ಆಮ್ಲಜನಕ, ವೆಂಟಿಲೇಟರ್ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ನಿರ್ಲಕ್ಷ ವಹಿಸಿದೆ. ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ದುರ್ಬಲ ವರ್ಗದವರಿಗೆ, ಬಡವರಿಗಾಗಿ ರಾಜ್ಯ– ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಿಸಿಲ್ಲ ಎಂದು ಕಾಂಗ್ರೆಸ್‌ ನಾಯಕರು ದೂರಿದ್ದಾರೆ.

ಧರಣಿಯ ನೇತೃತ್ವವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಹಿಸಿದ್ದಾರೆ.

ADVERTISEMENT

ಶಾಸಕರಾದ ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ,ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತಿತರರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.