
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಾಯಕರು ಹಾಗೂ ಶಾಸಕರು ಯಾವುದೇ ಹೇಳಿಕೆ ನೀಡಬಾರದು ಎಂದು ಕಠಿಣ ಎಚ್ಚರಿಕೆ ನೀಡಲಾಗಿದೆ ಎಂದು ಎಐಸಿಸಿಯ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಈ ಬಗ್ಗೆ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ಅಪಪ್ರಚಾರ ಮಾಡುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.
‘ಕಾಂಗ್ರೆಸ್‌ನ ಕೆಲವು ನಾಯಕರು ಹಾಗೂ ಶಾಸಕರ ಅನಗತ್ಯ ಹೇಳಿಕೆಗಳು ಊಹಾಪೋಹ ಹೆಚ್ಚಳಕ್ಕೆ ಕಾರಣವಾಗಿದೆ. ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಅಥವಾ ಪಟ್ಟಭದ್ರ ಹಿತಾಸಕ್ತಿಗಳು ಪ್ರಚಾರ ಮಾಡುತ್ತಿರುವ ಕಾರ್ಯಸೂಚಿಗೆ ಬೀಳದಂತೆ ಪಕ್ಷ ಅವರಿಗೆ ಕಠಿಣ ಎಚ್ಚರಿಕೆ ನೀಡಿದೆ’ ಎಂದು ಬರೆದುಕೊಂಡಿದ್ದಾರೆ.
ಪಕ್ಷದ ವಿವಿಧ ಪದಾಧಿಕಾರಿಗಳ ಅಭಿಪ್ರಾಯವನ್ನು ನಾಯಕತ್ವ ಈಗಾಗಲೇ ಸಂಗ್ರಹಿಸಿದೆ ಎಂದೂ ಅವರು ತಿಳಿಸಿದ್ದಾರೆ.
ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಅತ್ಯುತ್ತಮ ಮಾದರಿಯಾಗಿರುವ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳು ಮತ್ತು ಭರವಸೆಗಳನ್ನು ದುರ್ಬಲಗೊಳಿಸುವುದು ಏಕೈಕ ಉದ್ದೇಶ ಕಾರ್ಯಸೂಚಿಯ ಹಿಂದೆ ಅಡಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.