ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇದೇ ಬುಧವಾರ ನಡೆಯಲಿದೆ.
ನಗರದ ರ‍್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಬುಧವಾರ ಸಂಜೆ 6.30ರಿಂದ ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್‌ನ ಸಭಾ ನಾಯಕ ಎನ್.ಎಸ್. ಬೋಸರಾಜು ಮತ್ತು ಕೆಪಿಸಿಸಿಯ ಎಲ್ಲ ಕಾರ್ಯಾಧ್ಯಕ್ಷರು ಭಾಗವಹಿಸುತ್ತಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಂ ತಿಳಿಸಿದ್ದಾರೆ.
ವಿಧಾನ ಮಂಡಲದ ಬಜೆಟ್ ಅಧಿವೇಶನವು ಶುಕ್ರವಾರ ಕೊನೆಗೊಳ್ಳಲಿದೆ. ಎರಡು ದಿನ ಮುಂಚಿತವಾಗಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.