ಬೆಂಗಳೂರು: ಕಾರ್ಮಿಕ ಕಾನೂನು ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಸರ್ಕಾರದ ಪ್ರಸ್ತಾಪ ವಿರುದ್ಧ ಕಾಂಗ್ರೆಸ್ ಕಾರ್ಮಿಕರ ಮತ್ತು ರೈತರ ಜತೆಗೆ ಸೇರಿ ಹೋರಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿ ಉಳ್ಳವರ ಪರ ಧೋರಣೆ ಹೊಂದಿರುವ ಸರ್ಕಾರದ ವಿರುದ್ಧ ಹೋರಾಟ ನಿಶ್ಚಿತ' ಎಂದು ಎಚ್ಚರಿಸಿದರು.
ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.