ADVERTISEMENT

ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ: ಕಾಂಗ್ರೆಸ್‌ ಲೇವಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜೂನ್ 2023, 12:39 IST
Last Updated 30 ಜೂನ್ 2023, 12:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ. ಅಲ್ಲದೆ ಬಂಧನದಿಂದ ಹೊರಬರಬೇಕು ಎಂದರೆ ಆ ‘ಪಂಚೆ‘ಯನ್ನು ಹರಿಯಲೇಬೇಕು ಎಂದು ಕುಹಕವಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‌ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ. ಬಂಧನದಿಂದ ಹೊರಬರಬೇಕು ಎಂದರೆ ಆ ಪಂಚೆಯನ್ನು ಹರಿಯಲೇಬೇಕು. ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ 'ಸಂಘ'ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ. ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು‘ ಎಂದು ಕಾಂಗ್ರೆಸ್‌ ಹೇಳಿದೆ.

‘ಗ್ರಾಮ ಪಂಚಾಯಿತಿ ಚುನಾವಣೆಗೆ ನಿಂತು ಗೆಲ್ಲಲಾಗದ ದೊಣ್ಣೆನಾಯಕರೊಬ್ಬರು RSSನ ದೊಣ್ಣೆ ತೋರಿಸಿ ಇಡೀ ಬಿಜೆಪಿಯನ್ನು ಅಲ್ಲಾಡಿಸುತ್ತಿದ್ದಾರೆ. ಬಿ.ಎಲ್‌ ಸಂತೋಷ್‌ ಅವರೇ, ರೇಣುಕಾಚಾರ್ಯರ ಈ ಮಾತನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಗ್ರಾಂ.ಪಂ ಚುನಾವಣೆಗೆ ಸ್ಪರ್ದಿಸಿ ಗೆದ್ದು ತೋರಿಸಿ! ನಿಮ್ಮ ದಮ್ಮು ತಾಕತ್ತು ನಿರೂಪಿಸಿ‘ ಎಂದು ಸವಾಲೆಸೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.