ಬೆಂಗಳೂರು: ಶಿರಾ ಕ್ಷೇತ್ರದ ಉಪ ಚುನಾವಣೆ, ಗ್ರಾಮ ಪಂಚಾಯಿತಿ ಚುನಾವಣೆ, ಸದಸ್ಯತ್ವ ಅಭಿಯಾನ, ಬ್ಲಾಕ್, ಜಿಲ್ಲಾ ಘಟಕಗಳ ಪುನರ್ ರಚನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ ಭಾನುವಾರ (ಸೆ. 27) ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ.
ಕೆ.ಸಿ. ವೇಣುಗೋಪಾಲ್ ಅವರ ಬದಲು, ಪಕ್ಷದ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
‘ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಅಳವಡಿಸಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ವಿಚಾರ ವಿನಿಮಯ ನಡೆಯಲಿದೆ. ಶೀಘ್ರದಲ್ಲೇ ಕೆಪಿಸಿಸಿಗೆ ಹೊಸ ಪದಾಧಿಕಾರಿಗಳು ನೇಮಕ ಆಗಲಿದ್ದಾರೆ. ಹೀಗಾಗಿ ಈ ಸಭೆ ಮಹತ್ವದ್ದು’ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
‘ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ (ಸೆ. 28) ಬಂದ್ ಬೆಂಬಲಿಸಿ ಕಾಂಗ್ರೆಸ್ ಭವನದಲ್ಲಿ ಪಕ್ಷ ಪ್ರತಿಭಟನೆ ಹಮ್ಮಿಕೊಳ್ಳಲಿದೆ. ಈ ಪ್ರತಿಭಟನೆಯಲ್ಲೂ ಸುರ್ಜೇವಾಲ ಭಾಗವಹಿಸಲಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.