ADVERTISEMENT

27ರಿಂದ ಮೇಕೆದಾಟು ಪಾದಯಾತ್ರೆ ಮತ್ತೆ ಆರಂಭ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2022, 16:29 IST
Last Updated 18 ಫೆಬ್ರುವರಿ 2022, 16:29 IST
ಮೇಕೆದಾಟು ಪಾದಯಾತ್ರೆ
ಮೇಕೆದಾಟು ಪಾದಯಾತ್ರೆ   

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಆರಂಭಿಸಿದ್ದ ಪಾದಯಾತ್ರೆಯನ್ನು ಫೆಬ್ರುವರಿ 27ರಿಂದ ರಾಮನಗರದಿಂದ ಪುನಾರರಂಭಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

‘ಫೆ.27ಕ್ಕೆ ರಾಮನಗರದಿಂದ ಮತ್ತೆ ಪಾದಯಾತ್ರೆ ಆರಂಭವಾಗಲಿದೆ. ಆರು ದಿನಗಳ ಅವಧಿಯಲ್ಲಿ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಟ್ವಿಟರ್‌ನಲ್ಲಿ ಶುಕ್ರವಾರ ಪ್ರಕಟಿಸಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9 ರಂದು ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆ ಆರಂಭಿಸಿದ್ದರು. ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಆದ ಕಾರಣ ಪಾದಯಾತ್ರೆಯ ವಿಚಾರ ಹೈಕೋರ್ಟ್‌ವರೆಗೂ ತಲುಪಿತ್ತು. ಹೈಕೋರ್ಟ್‌ ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಅಂತ್ಯಗೊಳಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.