– ಪ್ರಜಾವಾಣಿ ಚಿತ್ರ
ಬೆಂಗಳೂರು: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಆರು ದಿನಗಳ ಕಸ್ಟಡಿಗೆ ಪಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗೇಂದ್ರ ಅವರನ್ನು ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಶುಕ್ರವಾರ ಸಂಜೆಯ ವೇಳೆಗೆ ವಶಕ್ಕೆ ಪಡೆದು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು.
ಶನಿವಾರ ನಸುಕಿನಲ್ಲಿ ಯಲಹಂಕದಲ್ಲಿರುವ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ ಅವರನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಇದೇ 18ರ ವರೆಗೆ ಒಟ್ಟು ಆರು ದಿನ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.