ಬೆಂಗಳೂರು: ಹತ್ತಿದ ಏಣಿಯನ್ನು ಒದೆಯುವುದು ಬಿಜೆಪಿಯ ಹಳೇ ಚಾಳಿ!. ಆಪರೇಷನ್ ಕಮಲಕ್ಕೆ ಬಲಿಯಾದ ರಮೇಶ್ ಜಾರಕಿಹೊಳಿ ಪರಿಸ್ಥಿತಿಯೂ ತಿಂದು ಎಸೆವ ಬಾಳೆ ಎಲೆಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.
ಸ್ವಂತ ಶಕ್ತಿಯಿಂದ ಅಧಿಕಾರದ ಹಿಡಿಯಲು ಸಾಧ್ಯವಾಗದೆ, 2019ರಲ್ಲಿ ಅನೈತಿಕ ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಸಿ ಸಮ್ಮಿಶ್ರ ಸರ್ಕಾರದ 17 ಶಾಸಕರನ್ನು ಸೆಳೆದು ಅಧಿಕಾರ ಅನುಭವಿಸಿದ ಬಿಜೆಪಿ, ಇಂದು ಅದೇ ಶಾಸಕರನ್ನು ಕಾಲಕಸದಂತೆ ಕಾಣುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಕೆಲದಿನಗಳಿಂದ ತಣ್ಣಗಾಗಿದ್ದ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣ ನಡುವಿನ ವಾಕ್ಸಮರ ಮತ್ತೆ ಜೋರಾಗಿದೆ. ವಿಜಯೇಂದ್ರ ಮತ್ತು ಅವರ ಬೆಂಬಲಿಗರು ಕೊಟ್ಟ ಎಚ್ಚರಿಕೆಯಿಂದ ರೊಚ್ಚಿಗೆದ್ದಿರುವ ಯತ್ನಾಳ ಮತ್ತು ರಮೇಶ ಜಾರಕಿಹೊಳಿ ಪಕ್ಷದ ಅಧ್ಯಕ್ಷರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.