ADVERTISEMENT

‘ಹಿಂದೂಗಳನ್ನು ಕಡೆಗಣಿಸಿದ್ದೇ ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ'

ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2018, 5:24 IST
Last Updated 4 ಆಗಸ್ಟ್ 2018, 5:24 IST
ಎಸ್‌.ಎಲ್‌.ಭೋಜೇಗೌಡ
ಎಸ್‌.ಎಲ್‌.ಭೋಜೇಗೌಡ   

ಮಂಗಳೂರು: ‘ಹಿಂದೂಗಳನ್ನು ಕಡೆಗಣಿಸಿದ್ದೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲಲು ಕಾರಣ’ ಎಂದು ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.

ನಗರದ ಸರ್ಕ್ಯೂಟ್ ಹವಸ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದಿನ‌ ಚುನಾವಣೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನ ಗಳಿಸಿತ್ತು. ಈಗ ಹೀನಾಯವಾಗಿ ಸೋತಿದೆ. ಕಳೆದ ಚುನಾವಣೆಯಲ್ಲಿ ಹಿಂದೂಗಳು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದರು. ಈ ಚುನಾವಣೆಯಲ್ಲಿ ಹಿಂದೂಗಳ ಮತಗಳು ಎಲ್ಲಿ ಹೋದವು ಎಂಬುದನ್ನು ಕಾಂಗ್ರೆಸ್ ತಿಳಿಯಬೇಕು' ಎಂದರು.

‘ಐದು ವರ್ಷಗಳ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನಡೆದ ಬೆಳವಣಿಗೆಗಳು ಹಿಂದೂ ಮತಗಳ ಧ್ರುವೀಕರಣಕ್ಕೆ ಕಾರಣವಾಯಿತು. ಅದು ಕಾಂಗ್ರೆಸ್ ಸೋಲಿಗೆ ದಾರಿ ಮಾಡಿತು. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಅಲ್ಪಸಂಖ್ಯಾತರನ್ನು ಜೊತೆಗೆ ಇರಿಸಿಕೊಂಡೇ ಹಿಂದೂಗಳಿಗೆ ಆದ್ಯತೆ ನೀಡುವಂತೆ ನಮ್ಮ ಪಕ್ಷದ‌ ಮುಖಂಡರಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.

ADVERTISEMENT

ಸ್ಥಳೀಯವಾಗಿ ನಿರ್ಧಾರ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ. ಈ ಕುರಿತು ರಾಜ್ಯ ಮಟ್ಟದಲ್ಲಿ ನಿರ್ಧಾರ ಆಗುವುದಿಲ್ಲ. ಸ್ಥಳೀಯ ಕಾರ್ಯಕರ್ತರ ಜೊತೆ ಸಮಾಲೋಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.