ADVERTISEMENT

ಮೇಕೆದಾಟು ಕಾಂಗ್ರೆಸ್ಸಿಗೆ ಈಗ ನೆನಪಾಗಿದೆ- ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2022, 14:31 IST
Last Updated 2 ಜನವರಿ 2022, 14:31 IST
ಎ. ನಾರಾಯಣಸ್ವಾಮಿ.
ಎ. ನಾರಾಯಣಸ್ವಾಮಿ.   

ಚಿತ್ರದುರ್ಗ:ಮೇಕೆದಾಟು ಯೋಜನೆ ಕಾಂಗ್ರೆಸ್ಸಿಗೆ ಈಗ ನೆನಪಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ವ್ಯಂಗ್ಯವಾಡಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌ ಪಕ್ಷದೊಳಗಿನ ಗೊಂದಲವನ್ನು ಸಮಾಜ ನೋಡಬಾರದೆಂದು ಪಾದಯಾತ್ರೆ ಪ್ರಾರಂಭಿಸಲಾಗಿದೆ. ಇಷ್ಟು ದಿನ ಮೇಕೆದಾಟು ಯೋಜನೆ ಮರೆತು ಹೋಗಿತ್ತಾ, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಏನು ಮಾಡಿತ್ತು, ಈಗ ಪಾದಯಾತ್ರೆ ಅಗತ್ಯವಿದೆಯೇ’ ಎಂದು ಪ್ರಶ್ನಿಸಿದರು.

‘ದೇವಸ್ಥಾನಗಳ ಅಭಿವೃದ್ಧಿಗೆ ಉಪವಿಭಾಗಾಧಿಕಾರಿಗಳು ಸಹಕರಿಸುತ್ತಿಲ್ಲ. ದೇವಸ್ಥಾನ ಸಮಿತಿ ರಚಿಸಿ ಬಿಟ್ಟಿದ್ದಾರೆ. ಆದ್ದರಿಂದ ಸ್ಥಳೀಯವಾಗಿ ಅಭಿವೃದ್ಧಿಗೊಳಿಸಲು ನಿಯಮ ರಚಿಸಲಾಗಿದೆ. ನಾವೇನು ದೇಗುಲಗಳನ್ನು ಪಾಕಿಸ್ತಾನ, ಬಾಂಗ್ಲಾದವರಿಗೆ ಬರೆದು ಕೊಡುತ್ತಿಲ್ಲ’ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

ADVERTISEMENT

‘ಅಧಿಕಾರ ನಡೆಸಲು ಕಿರಿಯ, ಹಿರಿಯ ಎಂಬುದು ಮುಖ್ಯವಲ್ಲ, ಬದ್ಧತೆ ಬೇಕು. ರಾಜ್ಯ ಸಚಿವ ಸಂಪುಟ ಪುನರ್ ರಚನೆ ಚರ್ಚೆ ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.