ADVERTISEMENT

ರೈತರ ಆತ್ಮಹತ್ಯೆಗೆ ಕಾರಣವಾದ ಕಾಂಗ್ರೆಸ್‌ನಿಂದ ಕೃಷಿ ಕಾಯ್ದೆಗೆ ವಿರೋಧ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 5:48 IST
Last Updated 20 ಜನವರಿ 2021, 5:48 IST
   

ಬೆಂಗಳೂರು: ಮೂರು ಹೊಸ ಕೃಷಿ ಕಾಯ್ದೆಗಳನ್ನು ವಾಪಸು ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಕಾಂಗ್ರೆಸ್ ನಡೆಸುತ್ತಿರುವ ರಾಜಭವನ ಚಲೋ ಪ್ರತಿಭಟನೆಯನ್ನು ಬಿಜೆಪಿ ಟ್ವಿಟ್ಟರ್‌ನಲ್ಲಿ ಟೀಕಿಸಿದೆ.

ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗಳಿಗೆ ಕಾರಣವಾದ ಕಾಂಗ್ರೆಸ್ ಪಕ್ಷವು ಪ್ರಧಾನಿ ನರೇಂದ್ರಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ. ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ? ಎಂದು ಬಿಜೆಪಿ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದೆ.

3800 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅವರ ಕಣ್ಣೀರು ಒರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ! ಎಂದು ಬಿಜೆಪಿ ಕುಟುಕಿದೆ.

ADVERTISEMENT

2019 ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡುವುದುದಾಗಿ ಕಾಂಗ್ರೆಸ್ ಘೋಷಿಸಿತ್ತು. ನರೇಂದ್ರ ಮೋದಿ ಸರ್ಕಾರ ಆ ಕಾರ್ಯ ಮಾಡಿದಾಗ ಮಾತ್ರ ಬೀದಿಗೆ ಬಂದು ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ಟ್ವಿಟ್ಟರ್‌ನಲ್ಲಿ ಕಿಡಿಕಾರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.