ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಧಿಕಾರ ಹಸ್ತಾಂತರದ ಗೊಂದಲವನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಲು ದೆಹಲಿಗೆ ಬಂದಿರುವ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರನ್ನು ಬುಧವಾರ ರಾತ್ರಿ ಭೇಟಿ ಮಾಡಿ ಸಮಾಲೋಚಿಸಿದರು.
‘ಕಳೆದ ಮೂರು ತಿಂಗಳಿಂದ ಸೃಷ್ಟಿಯಾಗಿರುವ ಗೊಂದಲದಿಂದ ಸರ್ಕಾರದ ಆಡಳಿತದ ಮೇಲೆ ಪರಿಣಾಮ ಬೀರಿದೆ. ಎರಡು ಬಣಗಳ ನಾಯಕರು ನಿತ್ಯ ಹೇಳಿಕೆಗಳನ್ನು ನೀಡುತ್ತಾ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರನ್ನು ಕರೆಸಿ ಸಂದೇಶ ನೀಡಿ ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು’ ಎಂದು ಅವರು ಆಗ್ರಹಿಸಿದರು.
‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ನಾಲ್ಕೈದು ತಿಂಗಳಲ್ಲಿ ಚುನಾವಣೆ ನಡೆಯಲಿದೆ. ನಾಯಕತ್ವ ಬಿಕ್ಕಟ್ಟನ್ನು ಬಗೆಹರಿಸದಿದ್ದರೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ’ ಎಂದೂ ಅವರು ವೇಣುಗೋಪಾಲ್ ಗಮನಕ್ಕೆ ತಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.