
ಪ್ರಜಾವಾಣಿ ವಾರ್ತೆ
ಬೆಂಗಳೂರು: ವಿಧಾನಸಭೆಯಲ್ಲಿ ಶುಕ್ರವಾರದ ಕಲಾಪದ ವೇಳೆ ಸಚಿವ ಬೈರತಿ ಸುರೇಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರ ಮನೆಯ ಮುಂದೆ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ರಾಜಾಜಿನಗರದಲ್ಲಿರುವ ಸುರೇಶ್ ಕುಮಾರ್ ಅವರ ಮನೆಯ ಮುಂದೆ ಶನಿವಾರ ಬೆಳಿಗ್ಗೆ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಮನೆಯ ಗೋಡೆಗಳಿಗೆ ಪೋಸ್ಟರ್‌ಗಳನ್ನು ಅಂಟಿಸಿದರು.
‘ತಾಯಂದಿರಿಗೆ ಅವಮಾನ ಆಗುವ ರೀತಿಯಲ್ಲಿ ಸುರೇಶ್ ಕುಮಾರ್ ಅವರು ಹೇಳಿಕೆ ನೀಡಿದ್ದರು. ಅದನ್ನು ವಿಧಾನಸಭೆಯ ಕಲಾಪದ ಕಡತಗಳಿಂದ ತೆಗೆಯಲಾಗಿದೆ. ಆದರೆ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.