
ಬೆಂಗಳೂರು: ‘ಮತಕಳವು ವಿರುದ್ಧ ಇದೇ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಿಂದ 300 ಜನರನ್ನು ಕರೆದುಕೊಂಡು ಹೋಗಬೇಕಿದೆ. ಈ ಬಗ್ಗೆ ಸಚಿವರಿಗೆ ಹಾಗೂ ಶಾಸಕರಿಗೆ ಸೂಚನೆ ನೀಡಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬುಧವಾರ ಬೆಳಿಗ್ಗೆ ದೆಹಲಿಗೆ ಹೊರಡುವ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರಿಗೆ ವಾಸ್ತವ್ಯ ಕಲ್ಪಿಸಲು ಕೆಲವರಿಗೆ ಜವಾಬ್ದಾರಿ ವಹಿಸಬೇಕಾಗಿದೆ. ಈ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಇದರ ಹೊರತಾಗಿ ಈ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ’ ಎಂದರು.
‘ಮತಕಳವು ವಿರುದ್ಧದ ಹೋರಾಟದಲ್ಲಿ ಪ್ರತಿ ತಾಲ್ಲೂಕಿನಿಂದ ಕನಿಷ್ಠ 30 ಜನರನ್ನು, ಬೆಂಗಳೂರಿನಿಂದ ಹೆಚ್ಚು ಜನರನ್ನು ಕರೆದೊಯ್ಯಬೇಕು. ವ್ಯವಸ್ಥೆ ಮಾಡಿಕೊಡುವಂತೆ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.