ಡಿಕೆಶಿ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು, ಬಲಿದಾನ ಮಾಡಿದವರು ಕಾಂಗ್ರೆಸಿಗರು. ಇತಿಹಾಸವನ್ನು ಜನರಿಗೆ ತಲುಪಿಸಬೇಕು’ ಎಂದು ಹೇಳಿದರು.
‘ಕುತಂತ್ರಗಳ ಮೂಲಕ ಈ ಸ್ವಾತಂತ್ರ್ಯಕ್ಕೆ ಧಕ್ಕೆ ತರುವವರು ಸಂವಿಧಾನ ವಿರೋಧಿಗಳು ಮಾತ್ರವಲ್ಲ, ಜೀವ ವಿರೋಧಿಗಳು. ಸಮಾಜಘಾತುಕರು. ಮತ ಕಳ್ಳತನ ದೇಶದ ಗೌರವಕ್ಕೆ ಧಕ್ಕೆ ತರುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.