ADVERTISEMENT

ಮಲ್ಲೇಶ್ವರದಲ್ಲಿರುವ BJP ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 18:08 IST
Last Updated 26 ಜೂನ್ 2025, 18:08 IST
   

ಬೆಂಗಳೂರು: ಬಿಜೆಪಿಯು ಕೃತಕ ಬುದ್ಧಿಮತ್ತೆ ಬಳಸಿ ಇಂದಿರಾಗಾಂಧಿ ಅವರ ಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.

ಇಂದಿರಾಗಾಂಧಿ ಅವರನ್ನು ಅವಮಾನಿಸಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅಟಲ್‌ ಬಿಹಾರಿ ವಾಜಪೇಯಿ ಅವರೇ ಇಂದಿರಾ ಅವರನ್ನು ಹೊಗಳಿದ್ದರು. ಈಗಿನ ಬಿಜೆಪಿ ಅವರನ್ನು ಅವಹೇಳನ ಮಾಡುತ್ತಿದೆ ಎಂದು ಹೇಳಿ, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.