ADVERTISEMENT

ಈತ ನನ್ನ ಪ್ರಾಮಾಣಿಕತೆಯನ್ನೇ ಪ್ರಶ್ನಿಸುತ್ತಿದ್ದಾನೆ: ನಲಪಾಡ್‌ ಮೇಲೆ ರಮ್ಯಾ ಗರಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮೇ 2022, 15:50 IST
Last Updated 12 ಮೇ 2022, 15:50 IST
ರಮ್ಯಾ ಮತ್ತು
ರಮ್ಯಾ ಮತ್ತು    

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬೆಂಬಲಿಗರ ವಿರುದ್ಧದ ಟ್ವೀಟ್‌ ಸಮರವನ್ನು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಮುಂದುವರಿಸಿದ್ದಾರೆ.

ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ ವಿರುದ್ಧ ಈ ಹಿಂದೆ ಕೇಳಿಬಂದಿದ್ದ ಆರೋಪಗಳ ವರದಿಗಳನ್ನು ರಮ್ಯಾ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಈ ಹುಡುಗ ಮೊಹಮ್ಮದ್ ನಲಪಾಡ್‌. ಗೌರವಾನ್ವಿತ ಕಾಂಗ್ರೆಸ್‌ ಶಾಸಕ ಹ್ಯಾರಿಸ್ ಪುತ್ರ. ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷನೂ ಆಗಿದ್ದಾನೆ. ಜಾಮೀನಿನ ಮೇಲೆ ಹೊರಗಿರುವ ಈತ ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾನೆ. ವಾಹ್...’ ಎಂದು ಟ್ವೀಟಿಸಿದ್ದಾರೆ.

ADVERTISEMENT

'ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಹಾಗೂ ಸಚಿವ ಅಶ್ವತ್ಥ್ ನಾರಾಯಣ್ ಅವರು ಗೌಪ್ಯವಾಗಿ ಭೇಟಿಯಾಗಿದ್ದರು' ಎಂದು ಡಿಕೆಶಿ ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ರಮ್ಯಾ, ‘ಬೇರೆ ಬೇರೆ ಪಕ್ಷಗಳ ನಾಯಕರು ಭೇಟಿಯಾಗುವುದು ಸಹಜ, ಪರಸ್ಪರ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಬೇರೆ ಬೇರೆ ಪಕ್ಷಗಳ ನಾಯಕರ ಕುಟುಂಬಗಳ ನಡುವೆ ಮದುವೆ ಸಂಬಂಧಗಳು ಏರ್ಪಟ್ಟಿವೆ. ಹಾಗಿರುವಾಗ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ.ಬಿ. ಪಾಟೀಲ್ ಮತ್ತು ಅಶ್ವತ್ಥ ನಾರಾಯಣ ಅವರ ಭೇಟಿ ಬಗ್ಗೆ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವುದು ಅಚ್ಚರಿ ಎನಿಸುತ್ತಿದೆ. ಇವುಗಳನ್ನೆಲ್ಲ ಬಿಟ್ಟು ಕಾಂಗ್ರೆಸ್ ಪಕ್ಷದ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಬಾರದೇ?’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.