ADVERTISEMENT

3 ಡಿಸಿಎಂ: ಹೈಕಮಾಂಡ್‌ ತೀರ್ಮಾನ- ಸಚಿವ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2023, 15:56 IST
Last Updated 16 ಸೆಪ್ಟೆಂಬರ್ 2023, 15:56 IST
<div class="paragraphs"><p> ಸಚಿವ ದಿನೇಶ್ ಗುಂಡೂರಾವ್</p></div>

ಸಚಿವ ದಿನೇಶ್ ಗುಂಡೂರಾವ್

   

ಬೆಂಗಳೂರು: ‘ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಎಲ್ಲ ತೀರ್ಮಾನಗಳನ್ನು ಹೈಕಮಾಂಡ್‌ ಮಾಡುತ್ತದೆ. ಈ ಬಗ್ಗೆ ಬಹಿರಂಗವಾಗಿ ಚರ್ಚಿಸುವ ಅಗತ್ಯವಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಾವೆಲ್ಲರೂ ಅವರ ಜೊತೆ ಇದ್ದೇವೆ. ಬೇರೆ ಯಾವುದೇ ವಿಷಯಗಳನ್ನು ಸದ್ಯ ಚರ್ಚಿಸುವ ಅವಶ್ಯವಿಲ್ಲ’ ಎಂದರು. 

ADVERTISEMENT

‘ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕಾಗಿ ಯಾವಾಗಲೂ ಮುಂದೆ ಇರುವ ಪಕ್ಷ. ಪಕ್ಷ ಯಾವುದೇ ಕಾರ್ಯಕ್ರಮಗಳನ್ನು ಮಾಡಿದರೂ ಎಲ್ಲ ಜನರಿಗೆ ತಲುಪುವಂತೆ ಮಾಡುತ್ತೇವೆ; ಅದು ಮುಖ್ಯ. ಅದರ ಹೊರತಾಗಿ ನಮ್ಮದು ಅಲ್ಪಸಂಖ್ಯಾತರು, ರೈತರು, ಮಹಿಳೆಯರು, ಬಡವರ ಪರ ಸರ್ಕಾರ’ ಎಂದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿ, ‘ಕಳೆದ ಚುನಾವಣೆಯಲ್ಲಿ ಎಲ್ಲ ಸಮುದಾಯಗಳು ಕಾಂಗ್ರೆಸ್‌ ಅನ್ನು ಬೆಂಬಲಿಸಿವೆ. ಆದರೆ, ಎಷ್ಟು ಉಪ ಮುಖ್ಯಮಂತ್ರಿ ಇರಬೇಕು ಎಂಬುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.