ADVERTISEMENT

ಹೆಗಡೆ, ಯತ್ನಾಳ್‌, ಶೋಭಾ, ರೇಣುಕಾಚಾರ್ಯರನ್ನು ಬಂಧಿಸುವಂತೆ ಕಾಂಗ್ರೆಸ್ ಮನವಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 7:58 IST
Last Updated 10 ಏಪ್ರಿಲ್ 2020, 7:58 IST
   

ಬೆಂಗಳೂರು:ಕೊರೊನಾ ಹರಡಲು ಮುಸ್ಲಿಮರು ಕಾರಣ ಎಂದು ಆರೋಪ ಮಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಇಬ್ಬರು ಶಾಸಕರ ವಿರುದ್ಧ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಶುಕ್ರವಾರ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ವಿಧಾನಪರಿಷತ್‌ ಸದಸ್ಯ ಎಂ.ಸಿ. ವೇಣುಗೋಪಾಲ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬೆಂಗಳೂರಿನ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಭೇಟಿ ಮಾಡಿತು.

ಕೊರೊನಾ ಸೋಂಕು ಹರಡಿಕೆ ಸಂಬಂಧ ವದಂತಿಗಳನ್ನು ಹಬ್ಬಿಸುವುದರ ಜತೆಗೆ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಕೋಮು ಸಾಮರಸ್ಯ ಕದಡಲು ಯತ್ನಿಸುತ್ತಿರುವ ಕೇಂದ್ರ ಸಚಿವರಾದ ಅನಂತಕುಮಾರ ಹೆಗಡೆ, ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಶೋಭಾ ಕರಂದ್ಲಾಜೆ ವಿರುದ್ಧ ಐಪಿಸಿ ಕಲಂ 153 A ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರವಾಗಿ ಮನವಿ ಸಲ್ಲಿಸಿದರು.

ADVERTISEMENT

ಸಂಸದ ಅನಂತ್‌ಕುಮಾರ ಹೆಗಡೆ ಮತ್ತು ಬಿಜೆಪಿ ಶಾಸಕರು ನೀಡಿದ್ದ ಹೇಳಿಕೆಗಳ ಲಿಂಕ್‌ ಇಲ್ಲಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.