
ಬೆಂಗಳೂರು: ಕರ್ನಾಟಕದಲ್ಲಿ ಮತಗಳವು ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆರೋಪ ಮಾಡಿದ್ದರು, ಆದರೆ ಅದು ಸುಳ್ಳು ಎನ್ನುವುದು ಅವರ ಪಕ್ಷದವರು ಮಾಡಿರುವ ಸಮೀಕ್ಷೆಯಿಂದಲೇ ಬಹಿರಂಗವಾಗಿದೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ಅಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.
ಕರ್ನಾಟಕದ ಚುನಾವಣಾ ಆಯೋಗದ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಅಧೀನದಲ್ಲಿ ಬರುವ ಸ್ವಾಯತ್ತ ಸಂಸ್ಥೆ ಕೆಎಮ್‌ಇಎ ಸಮೀಕ್ಷೆ ನಡೆಸಿತ್ತು. ಇದರಲ್ಲಿ ಭಾರತದ ಚುನಾವಣಾ ಆಯೋಗದ ಪಾತ್ರವೂ ಕೂಡ ಇರಲಿಲ್ಲ ಎಂದು ತಿಳಿಸಿದ್ದಾರೆ.
ಸಮೀಕ್ಷೆಯಲ್ಲಿ ಭಾಗವಹಿಸಿದ ಶೇ 84.55 ಜನರು, ದೇಶದಲ್ಲಿ ಚುನಾವಣೆಗಳು ಸ್ವತಂತ್ರ ಮತ್ತು ಪಾರದರ್ಶಕವಾಗಿ ನಡೆಯುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ 83.61ಜನರು ಇವಿಎಂಗಳು ನಂಬಿಕೆಗೆ ಅರ್ಹ ಹಾಗೂ ನಿಖರವಾದ ಫಲಿತಾಂಶ ನೀಡುತ್ತವೆ ಎಂದಿದ್ದಾರೆ. 2023ರಲ್ಲಿ ಶೇ 77.9 ಜನರಿಗೆ ಇವಿಎಂ ಕುರಿತು ನಂಬಿಕೆ ಇದ್ದರೆ, ಈಗ ಅದು ಶೇ 83.61ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ಮತಕಳವು ಅಭಿಯಾನ ಮಾಡಿದ್ದರು. ಆದರೆ, ಸಮೀಕ್ಷೆಯಲ್ಲಿ ಜನರು ಚುನಾವಣೆ ಹಾಗೂ ಇವಿಎಂ ಕುರಿತು ವಿಶ್ವಾಸ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್‌ನ ಮುಖವಾಡ ಕಳಿಚಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.