
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿರುವ ಸ್ಥಳೀಯ ಕಾಂಗ್ರೆಸ್ ಮುಖಂಡ ಬಿ.ವಿ. ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ಪಕ್ಷದ ಶಿಸ್ತು ಸಮಿತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಪತ್ರ ಬರೆದಿದ್ದಾರೆ.
‘ಗಂಭೀರ ಶಿಸ್ತು ಉಲ್ಲಂಘನೆಯ ಆರೋಪದ ಕಾರಣ ಪಕ್ಷದಿಂದ ಅಮಾನತುಗೊಳಿಸಲು ಸೂಚಿಸಿ ಪ್ರಕರಣವನ್ನು ಶಿಸ್ತು ಸಮಿತಿಗೆ ರವಾನಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಸೂಚಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ಪರಿಶೀಲಿಸಿ ತಕ್ಷಣ ರಾಜೀವ್‌ಗೌಡ ಅವರನ್ನು ಅಮಾನತುಗೊಳಿಸಬೇಕು’ ಎಂದು ಸಮಿತಿಯ ಅಧ್ಯಕ್ಷ ಕೆ. ರೆಹಮಾನ್ ಖಾನ್ ಅವರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.
‘ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ‘ಜ.15ರಂದು ನೋಟಿಸ್ ಜಾರಿ ಮಾಡಲಾಗಿತ್ತು. ಆ ನೋಟಿಸ್‌ಗೆ ಉತ್ತರ ನೀಡಿಲ್ಲ. ಹೀಗಾಗಿ ಅವರನ್ನು ಪಕ್ಷದಿಂದ ತಕ್ಷಣ ಅಮಾನತುಗೊಳಿಸಬೇಕು’ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.