ADVERTISEMENT

ಸೈನ್ಯಕ್ಕೆ ಬೆಂಬಲ ಸೂಚಿಸಿ ಕಾಂಗ್ರೆಸ್‌ನಿಂದ ‘ತಿರಂಗಾ ಯಾತ್ರೆ’ ಇಂದು

​ಪ್ರಜಾವಾಣಿ ವಾರ್ತೆ
Published 9 ಮೇ 2025, 0:00 IST
Last Updated 9 ಮೇ 2025, 0:00 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನ್ಯಕ್ಕೆ ಬೆಂಬಲ ಸೂಚಿಸಿ ನಗರದ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಮಿನ್ಸ್ಕ್ ಸ್ಕ್ವೇರ್‌ವರೆಗೆ ಶುಕ್ರವಾರ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ.

ADVERTISEMENT

‘ಬೆಳಿಗ್ಗೆ 9.30ರಿಂದ 10.30ರವರೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಯಾತ್ರೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರ್ಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಾಹಿತಿಗಳು, ಚಿಂತಕರು, ಚಿತ್ರರಂಗದವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಎಲ್ಲರಿಗೂ ಭಾಗವಹಿಸಲು ಮುಕ್ತ ಆಹ್ವಾನ ನೀಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.