ADVERTISEMENT

ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ, ಒಗ್ಗಟ್ಟಾಗಿದ್ದೇವೆ: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 9:51 IST
Last Updated 1 ಡಿಸೆಂಬರ್ 2025, 9:51 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಮೈಸೂರು: 'ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆ, ಭಿನ್ನಮತೀಯ ಚಟುವಟಿಕೆ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಪ್ರಬುದ್ಧತೆಯಿಂದ ನಡೆದುಕೊಳ್ಳುತ್ತಿದ್ದಾರೆ. ಸಣ್ಣಪುಟ್ಟ ಗೊಂದಲಗಳು ಬಗೆಹರಿದಿವೆ' ಎಂದರು.

ವಿವಿಧ ಮಠಾಧೀಶರಿಂದ ಒತ್ತಾಯದ ಕುರಿತು ಪ್ರತಿಕ್ರಿಯಿಸಿ, 'ಪ್ರಜಾಪ್ರಭುತ್ವದಲ್ಲಿ ಅವರ ಅಭಿಪ್ರಾಯ ಹೇಳಲು ಎಲ್ಲರಿಗೂ ಅವಕಾಶ ಇದೆ. ಆದರೆ, ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತದೆ' ಎಂದರು.

ADVERTISEMENT

'ಉಪಾಹಾರ ಸಭೆಗಳಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಅಲ್ಲಿ ಎಲ್ಲ ಚರ್ಚೆಗಳೂ ನಡೆಯುತ್ತವೆ. ಹಾಗೆಂದ ಮಾತ್ರಕ್ಕೆ ಅಸಮಾಧಾನ ಎಂದೇನಿಲ್ಲ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.