ADVERTISEMENT

ಕುಟುಂಬ ರಾಜಕಾರಣಕ್ಕಾಗಿ ಕಾಂಗ್ರೆಸ್ ವಿದೇಶಿ ಶಕ್ತಿಗಳನ್ನು ಆಶ್ರಯಿಸಿತ್ತು: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಮಾರ್ಚ್ 2023, 9:02 IST
Last Updated 14 ಮಾರ್ಚ್ 2023, 9:02 IST
   

ಬೆಂಗಳೂರು: ಮೋದಿ ಸರ್ಕಾರ ಪ್ರಜಾಪ್ರಭುತ್ವವನ್ನು ತುಳಿಯುತ್ತಿದೆ ಎಂಬ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಕುಟುಂಬ ರಾಜಕಾರಣಕ್ಕಾಗಿ ಕಾಂಗ್ರೆಸ್‌ 65 ವರ್ಷ ವಿದೇಶಿ ಶಕ್ತಿಗಳನ್ನು ಆಶ್ರಯಿಸಿತು ಎಂದು ವ್ಯಂಗವಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಕರ್ನಾಟಕ ಘಟಕ, ಕಾಂಗ್ರೆಸ್‌ ಈಗ ಪ್ರಜಾಪ್ರಭುತ್ವದ ಕುರಿತು ಮಾತನಾಡುತ್ತಿದೆ. ಆದರೆ ಕುಟುಂಬ ರಾಜಕಾರಣಕ್ಕಾಗಿ ಕಾಂಗ್ರೆಸ್‌ 65 ವರ್ಷ ವಿದೇಶಿ ಶಕ್ತಿಗಳನ್ನೇ ಆಶ್ರಯಿಸಿತ್ತು. ಕುಟುಂಬ ರಾಜಕಾರಣಕ್ಕೆ ಮತದಾರರು ತಿಲಾಂಜಲಿ ನೀಡಿ ಈಗ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ ಎಂದಿದೆ.


ಅಪಾಯದಲ್ಲಿರುವುದು ಪ್ರಜಾಪ್ರಭುತ್ವವಲ್ಲ, ನಿಮ್ಮ ನ್ಯಾಷನಲ್‌ ಹೆರಾಲ್ಡ್‌ ಕೇಸು ಮತ್ತು ಕರ್ನಾಟಕದ ನಾಯಕರು ಮಾಡಿಟ್ಟ ಅಕ್ರಮ ಕಾಸು ಎಂದು ಬಿಜೆಪಿ ತಿರುಗೇಟು ನೀಡಿದೆ.

ADVERTISEMENT


ಕೇಂಬ್ರಿಜ್‌ನಲ್ಲಿ ರಾಹುಲ್‌ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಹೇಳಿಕೆಯನ್ನು ಮೋದಿ ಸರ್ಕಾರ ತಿರುಚುತ್ತಿದೆ ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.