ADVERTISEMENT

ಬಿಬಿಎಂಪಿ ಮೇಯರ್‌ ಚುನಾವಣೆ| ನಾವು ಅಭ್ಯರ್ಥಿ ಹಾಕುತ್ತೇವೆ: ದಿನೇಶ್‌ ಗುಂಡೂರಾವ್‌

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2019, 11:21 IST
Last Updated 23 ಸೆಪ್ಟೆಂಬರ್ 2019, 11:21 IST
   

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್‌, ಉಪಮೇಯರ್‌ ಚುನಾವಣೆ ಕುರಿತು ಕಾಂಗ್ರೆಸ್‌ ಸೋಮವಾರ ಮಹತ್ವದ ಸಭೆ ನಡೆಸಿತು. ಸಭೆ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ‘ಮೇಯರ್‌ ಚುನಾವಣೆಗೆ ನಾವೂ ಅಭ್ಯರ್ಥಿಯನ್ನು ಹಾಕುತ್ತೇವೆ,’ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದ ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಶಾಸಕಿ ಸೌಮ್ಯ ರೆಡ್ಡಿ, ಅಖಂಡ ಶ್ರೀನಿವಾಸ್ ಮೂರ್ತಿ, ಭೈರತಿ ಸುರೇಶ್ ಸೇರಿದಂತೆ ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು ಭಾಗವಹಿಸಿದ್ದರು.

ADVERTISEMENT

ಮೇಯರ್ ಚುನಾವಣೆಗೆ ಅಭ್ಯರ್ಥಿ ಹಾಕಬೇಕೇ, ಬೇಡವೇ ಎಂಬ ಸಭೆಯಲ್ಲಿ ಬಗ್ಗೆ ಚರ್ಚೆ ನಡೆಯಿತು.

ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ‘ಮೇಯರ್‌ ಚುನಾವಣೆಗೆ ನಾವು ಅಭ್ಯರ್ಥಿ ಹಾಕುತ್ತೇವೆ. ಗೆಲ್ಲುವ ವಿಶ್ವಾಸವಿದೆ. ಚುನಾವಣೆ ಮುಂದೂಡಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ನಾವು ಮೇಯರ್ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅಭ್ಯರ್ಥಿ ಯಾರು ಎಂಬುದನ್ನು ಶೀಘ್ರವೇ ನಿರ್ಧರಿಸುತ್ತೇವೆ,’ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.