ADVERTISEMENT

‘ಚುನಾವಣೆ ನಂತರ ಕಾಂಗ್ರೆಸ್ ಮೂರು ಹೋಳು’

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 19:37 IST
Last Updated 31 ಅಕ್ಟೋಬರ್ 2020, 19:37 IST

ಶಿರಾ: ಬಣ ರಾಜಕೀಯ ಮತ್ತು ಆಂತರಿಕ ಕಚ್ಚಾಟದಿಂದ ರಾಜ್ಯದಲ್ಲಿ ಒಡೆದ ಮನೆಯಂತಾಗಿರುವ ಕಾಂಗ್ರೆಸ್ ಪಕ್ಷ ಚುನಾವಣೆ ಫಲಿತಾಂಶದ ನಂತರ ಮೂರು ಹೋಳಾಗಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶಿರಾ ಕ್ಷೇತ್ರದಲ್ಲಿಕಾಂಗ್ರೆಸ್‌ನವರೇ ಅವರ ಅಭ್ಯರ್ಥಿಯನ್ನು ಸೋಲಿಸಲಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವು ಸಾಧಿಸುವುದು ಖಚಿತ. ಹಾಗಾಗಿ ಚುನಾವಣೆ ನಂತರ ಕಾಂಗ್ರೆಸ್ ಕೂಡ ಮೂರು ಹೋಳಾಗುವುದು ಕೂಡ ಅಷ್ಟೇ ಖಚಿತ’ ಎಂದರು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಈಗಲೇ ಮುಖ್ಯಮಂತ್ರಿ ಕುರ್ಚಿಗೆ ಜಗಳವಾಡುತ್ತಿದ್ದಾರೆ. ಪಕ್ಷದಲ್ಲಿ ಅಂತರಿಕ ಜಗಳ ಹೆಚ್ಚಾಗಿ ಒಬ್ಬರ ಕಾಲು ಒಬ್ಬರು ಎಳೆಯುತ್ತಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.