ಬೆಂಗಳೂರು: ಅವಸಾನದ ಅಂಚಿನಲ್ಲಿರುವ ಹೆಬ್ಬಕ (ಗ್ರೇಟ್ ಇಂಡಿಯನ್ ಬಸ್ಟರ್ಡ್) ಸಂರಕ್ಷಣೆಗಾಗಿ ಸಮಿತಿ ಸದಸ್ಯರ ಪರಿಣಿತಿ ಬಗ್ಗೆ ಹೈಕೋರ್ಟ್ ಅಸಮಧಾನ ವ್ಯಕ್ತಪಡಿಸಿದ ಕಾರಣ ಸಮಿತಿಯನ್ನು ರಾಜ್ಯ ಸರ್ಕಾರ ಪುನರ್ ರಚಿಸಿದೆ.
ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಸಮಿತಿಯನ್ನು ಪುನರ್ ರಚಿಸಿ ಹೊರಡಿಸಿರುವ ಆದೇಶದ ಪ್ರತಿಯನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೈಕೋರ್ಟ್‌ಗೆ ಸಲ್ಲಿಸಿದರು.
ಕೊಯಮತ್ತೂರಿನ ಸಲೀಂ ಸೆಂಟರ್ ಫಾರ್ ಆರ್ನಿಥಾಲಜಿ ಆ್ಯಂಡ್ ನ್ಯೂಟ್ರಲ್ ಹಿಸ್ಟರಿ (ಸ್ಯಾಕಾನ್) ನೀಡಿರುವ ಶಿಫಾರಸು ಅನುಷ್ಠಾನಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹಿಂದಿನ ವಿಚಾರಣೆ ವೇಳೆ ಪೀಠ ಅಭಿಪ್ರಾಯಪಟ್ಟಿತ್ತು.
ಬಳ್ಳಾರಿಯ ಎಡ್ವರ್ಡ್ ಸಂತೋಷ್ ಮಾರ್ಟಿನ್ ಮತ್ತು ಇತರ ಇಬ್ಬರು ಸಲ್ಲಿಸಿ ‘ಹೆಬ್ಬಕಗಳ ಆವಾಸಸ್ಥಾನಗಳಲ್ಲಿ ನಾಗರಿಕ ಚಟುವಟಿಕೆಗಳು ಹೆಚ್ಚುತ್ತಿರುವ ಕಾರಣ ಅವುಗಳು ಅಳಿವಿನ ಅಂಚಿನಲ್ಲಿವೆ. ಪರಿಸರ ಪರಿಣಾಮ ಮೌಲ್ಯಮಾಪನ ಅಧಿಸೂಚನೆಯಲ್ಲಿನ ಸಂರಕ್ಷಿತ ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆ ಅಥವಾ ಹೊಸ ಯೋಜನೆಗಳನ್ನು ನಿಷೇಧಿಸಬೇಕು’ ಎಂದು ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.