ಬೆಂಗಳೂರು: ‘ಶಾಲಾ ಶಿಕ್ಷಕರನ್ನು ಕೊರೊನಾ ಸೇನಾನಿಗಳು ಎಂದು ಪರಿಗಣಿಸಿ, ಅವರಿಗೆ ಕೋವಿಡ್ ಲಸಿಕೆ ನೀಡಲು ಆದ್ಯತೆ ನೀಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತ್ಯೇಕ ಪತ್ರ ಬರೆದು ಮನವಿ ಮಾಡಿದ್ದಾರೆ.
‘ಶಿಕ್ಷಣ ಇಲಾಖೆ ನೌಕರರನ್ನೂ ಕೊರೊನಾ ಸೇನಾನಿಗಳು ಎಂದು ಪರಿಗಣಿಸಿ ಲಸಿಕೆ ನೀಡಲು ಆದ್ಯತೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗುಹಾ ಅವರಿಗೆ ಪ್ರಸ್ತಾವನೆ ಸಲ್ಲಿಸಿ ಮನವಿ ಮಾಡಿದ್ದಾರೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.