ADVERTISEMENT

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ತಿದ್ದುಪಡಿ: ಖರ್ಗೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2021, 16:45 IST
Last Updated 26 ಡಿಸೆಂಬರ್ 2021, 16:45 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಕಲಬುರಗಿ: ‘ಬಿಜೆಪಿಯು ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ಸಂವಿಧಾನ ತಿದ್ದುಪಡಿಯಾಗುತ್ತದೆ. ಇದು ನೇರವಾಗಿ ಕೋಟ್ಯಂತರ ಜನರ ಬದುಕಿನ ಮೇಲೆ ಪರಿಣಾಮ ಬೀರುತ್ತದೆ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಯಾರು ಏನು ತಿನ್ನಬೇಕು, ಏನು ತಿನ್ನಬಾರದು ಎಂಬ ಬಗ್ಗೆ ನಿರ್ದೇಶಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಧಕ್ಕೆ ಬರಲಿದೆ’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್–19 ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವ ಬದಲು ಬರೀ ಭಾಷಣದಲ್ಲಿ ಕಾಲ ಕಳೆಯುತ್ತಿದ್ದಾರೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆಯನ್ನೂ ಕಡಿಮೆ ದಾಖಲಿಸಿದ್ದಾರೆ’ ಎಂದು ಹೇಳಿದರು. Tpml2020

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.