ADVERTISEMENT

ಒಂದೇ ವರ್ಷದಲ್ಲಿ 117 ಪೊಲೀಸ್ ಠಾಣೆ ನಿರ್ಮಾಣ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 22:09 IST
Last Updated 4 ಸೆಪ್ಟೆಂಬರ್ 2022, 22:09 IST
   

ಹುಬ್ಬಳ್ಳಿ: 'ಕರ್ನಾಟಕ ರಾಜ್ಯ ಹುಟ್ಟಿದ ನಂತರ ಇದೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ 117 ಪೊಲೀಸ್ ಠಾಣೆ ನಿರ್ಮಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿಯೇ ಇದು ಮೈಲಿಗಲ್ಲು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗೋಕುಲ ರಸ್ತೆ, ವಿದ್ಯಾನಗರ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ಕಸಬಾಪೇಟೆ, ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ಜನಸ್ನೇಹಿ ಪೊಲೀಸ್‌ ವ್ಯವಸ್ಥೆಗೆ ಸರ್ಕಾರ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ. ಅಧಿಕಾರಿಗಳು ನೆಪ ಹೇಳದೆ ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸಬೇಕು. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಲು ಯಾರಿಗೂ ಭಯಪಡಬೇಕಿಲ್ಲ‘ ಎಂದು ಹೇಳಿದರು.

ADVERTISEMENT

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಪ್ರಸಕ್ತ ವರ್ಷ 5 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ ಮತ್ತು 900 ಪಿಎಸ್ಐಗಳ ನೇಮಕಾತಿಗೆ ಶೀಘ್ರ ಚಾಲನೆ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.