ADVERTISEMENT

ವಿವಿಧೆಡೆ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 19:30 IST
Last Updated 15 ಜೂನ್ 2020, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯಲ್ಲಿ ಮುಂಗಾರು ಚುರುಕಾಗಿದೆ.

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ಎರಡೂ ಜಿಲ್ಲೆಗಳಲ್ಲಿ ಜುಲೈ 16ರಿಂದ 20ರವರೆಗೆ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆ,‘ಯೆಲ್ಲೊ ಅಲರ್ಟ್‌’ ಘೋಷಿಸಿದೆ. ಈ ಅವಧಿಯಲ್ಲಿ ವೇಗವಾಗಿ ಗಾಳಿ ಬೀಸಲಿದ್ದು, 6ರಿಂದ 11 ಸೆಂ.ಮೀ.ಗೂ ಹೆಚ್ಚಿನ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ADVERTISEMENT

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ.ಕೊಡಗು ಜಿಲ್ಲೆಯ ಮಡಿಕೇರಿ, ತಲಕಾವೇರಿ ಹಾಗೂ ಭಾಗಮಂಡಲ,ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಹೆತ್ತೂರಿನಲ್ಲಿ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ನಗರ ಸುತ್ತಮುತ್ತ ತುಂತುರು ಮಳೆಯಾಗಿದೆ.ದಾವಣಗೆರೆ ನಗರದಲ್ಲೂ ಆಗೀಗ ತುಂತುರು ಮಳೆಯಾಗಿದೆ. ಧಾರವಾಡ,ಹಾವೇರಿ ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗಿದೆ.ಬೆಳಗಾವಿ, ಖಾನಾಪುರ, ರಾಮದುರ್ಗದಲ್ಲಿ ದಿನವಿಡೀ ಜಿಟಿಜಿಟಿ ಮಳೆಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಆದರೆ, ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ.

ಕಲಬುರ್ಗಿ ನಗರದಲ್ಲಿ ಸೋಮವಾರ ಮಧ್ಯಾಹ್ನ ಕೆಲ ಹೊತ್ತು ಬಿರುಸಿನ ಮಳೆ ಸುರಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.