ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಸೇವೆಯನ್ನು ಕಾಯಂಗೊಳಿಸುವ ಬಗ್ಗೆ
ಗುರುವಾರವೇ ಆದೇಶ ಹೊರಡಿಸಲಿದ್ದು, ಇನ್ನು ಒಂದು ತಿಂಗಳಲ್ಲಿ ಎಲ್ಲರನ್ನೂ ಕಾಯಂ ಮಾಡುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಭರವಸೆನೀಡಿದರು.
ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ತೀರ್ಮಾನ ತೆಗೆದುಕೊಳ್ಳುವುದಾಗಿ ಅವರು ತಮ್ಮನ್ನು ಭೇಟಿ ಮಾಡಿದ ಗುತ್ತಿಗೆ ವೈದ್ಯರಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.