ADVERTISEMENT

ಪ್ರವೀಣ್‌ ನೆಟ್ಟಾರು ಪತ್ನಿಗೆ ಗುತ್ತಿಗೆ ನೌಕರಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 15:57 IST
Last Updated 29 ಸೆಪ್ಟೆಂಬರ್ 2022, 15:57 IST
ಪ್ರವೀಣ್‌– ನೂತನಾ ದಂಪತಿ
ಪ್ರವೀಣ್‌– ನೂತನಾ ದಂಪತಿ   

ಬೆಂಗಳೂರು: ಜುಲೈ 26ರಂದು ಕೊಲೆಗೀಡಾದ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಎಂ. ಅವರಿಗೆ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ‘ಸಿ’ ದರ್ಜೆಯ ಗುತ್ತಿಗೆ ನೌಕರಿ ನೀಡಿ ಗುರುವಾರ ಆದೇಶ ಹೊರಡಿಸಲಾಗಿದೆ.

ಪ್ರವೀಣ್‌ ಪತ್ನಿಗೆ ತಮ್ಮ ಸಚಿವಾಲಯದಲ್ಲಿ ನೌಕರಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್‌ 10 ರಂದು ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನಾ ಸಮಾವೇಶದಲ್ಲಿ ಘೋಷಿಸಿದ್ದರು. ಅದರಂತೆಯೇ, ನೂತನಕುಮಾರಿ ಅವರಿಗೆ ಉದ್ಯೋಗ ನೀಡಲಾಗಿದೆ.‌

ಗುತ್ತಿಗೆ ಆಧಾರದಲ್ಲಿ ಸಹಾಯಕ (ಸಿ–ದರ್ಜೆ) ಹುದ್ದೆ ನೀಡಿದ್ದು, ₹30,350 ಸಂಚಿತ ವೇತನ ನಿಗದಿಪಡಿಸಲಾಗಿದೆ. ಅವರ ಅಂಕಪಟ್ಟಿ ಮತ್ತು ಇತರ ಶೈಕ್ಷಣಿಕ ದಾಖಲೆಗಳ ನೈಜತೆ ಪರಿಶೀಲನೆಯನ್ನು ಸಂಬಂಧಿಸಿದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳ ಮೂಲಕ ಎರಡು ತಿಂಗಳೊಳಗೆ ಪರಿಶೀಲನೆ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.