
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘಕ್ಕೆ 2025–26ನೇ ಸಾಲಿನಿಂದ ಐದು ವರ್ಷದ ಅವಧಿಗೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆರ್. ಮಂಜುನಾಥ್ ಅವರು ಮರು ಆಯ್ಕೆಯಾಗಿದ್ದರೆ, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಎಂ. ನಂದಕುಮಾರ್, ಖಜಾಂಚಿಯಾಗಿ ಡಿ.ಎಂ. ನಾಗರಾಜ್ ಹಾಗೂ ಗೌರವಾಧ್ಯಕ್ಷರು, ಕಾರ್ಯಾಧ್ಯಕ್ಷರು, ಉಪಾಧ್ಯಕ್ಷರು, ಜಂಟಿ ಕಾರ್ಯದರ್ಶಿಗಳು ಚುನಾಯಿತರಾಗಿದ್ದಾರೆ.
ರಾಜ್ಯದ 31 ಜಿಲ್ಲೆಗಳ ಗುತ್ತಿಗೆದಾರರ ಸಂಘದಿಂದ 67 ಪದಾಧಿಕಾರಿಗಳು ಅವಿರೋಧವಾಗಿ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಆಯ್ಕೆಯಾದರು. ಅವರೆಲ್ಲ ಸೇರಿ ರಾಜ್ಯ ಸಂಘದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ನಂದಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.